Tuesday, May 11, 2021
Homeಅಂತರ್ ರಾಜ್ಯಮಹಾರಾಷ್ಟ್ರದಲ್ಲಿ ಮತ್ತೆ 67 ಸಾವಿರ ಹೊಸ ಕೊರೋನಾ ಪ್ರಕರಣ ದಾಖಲು , 676 ಮಂದಿ...

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೆ 67 ಸಾವಿರ ಹೊಸ ಕೊರೋನಾ ಪ್ರಕರಣ ದಾಖಲು , 676 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಶನಿವಾರ ಕೂಡ ಮಹಾರಾಷ್ಟ್ರದಲ್ಲಿ ಮತ್ತೆ 65 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ.

ಶನಿವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 67,160 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 42,28,836ಕ್ಕೆ ಏರಿಕೆಯಾಗಿದೆ. ಅಂತೆಯೇ 676 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸಾವಿನ ಸಂಖ್ಯೆ 63928ಕ್ಕೆ ಏರಿಕೆಯಾಗಿದೆ.

ನಿನ್ನೆ ಮಹಾರಾಷ್ಟ್ರದಲ್ಲಿ 63,818 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 34,68,610ಕ್ಕೆ ಏರಿಕೆಯಾಗಿದೆ. ಇನ್ನು ಪ್ರಸ್ತುತ ಮಹಾರಾಷ್ಟ್ರದಲ್ಲಿ 6,94,480 ಸಕ್ರಿಯ ಪ್ರಕರಣಗಳಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ಹಾಟ್ ಸ್ಪಾಟ್ ಮುಂಬೈನಲ್ಲಿ ಕೊಂಚ ಕಡಿಮೆ ಪ್ರಕರಣ ದಾಖಲಾಗಿದ್ದು, 5,888 ಸೋಂಕು ಪ್ರಕರಣಗಳು ದಾಖಲಾಗಿದೆ. 71 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img