Tuesday, May 18, 2021
Homeಸುದ್ದಿ ಜಾಲಮಾಜಿ ಸಚಿವ ಎಚ್.ಆಂಜನೇಯಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಾಜಿ ಸಚಿವ ಎಚ್.ಆಂಜನೇಯಗೆ ಕೊರೊನಾ ಪಾಸಿಟಿವ್

ಚಿತ್ರದುರ್ಗ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ ಎಚ್. ಅಂಜನೇಯ ಹಾಗೂ ಅವರ ಪತ್ನಿ ವಿಜಯ ಆಂಜನೇಯ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿರುವ ಆಂಜನೇಯ ಅವರು, ಕಳೆದ ಎರಡು ದಿನಗಳಿಂದ ನನ್ನ ಪತ್ನಿ ಹಾಗೂ ನನಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದ್ದು, ಕೂಡಲೇ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದೇವೆ. ಪರೀಕ್ಷೆಗೆ ಒಳಪಟ್ಟಾಗ ಸೋಂಕು ದೃಢಪಟ್ಟಿದೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪ್ರತಿಯೊಬ್ಬರು ಕೋವಿಟ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img