Tuesday, May 11, 2021
Homeಸುದ್ದಿ ಜಾಲಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ದಿನೇಶ್ ಅಲಿಯಾಸ್ ಕ್ರೇಜಿ ಕ್ರೂಸ್ ಕಾಲಿಗೆ ಗುಂಡೇಟು ಬಿದ್ದಿದೆ.

ಅಶೋಕ ನಗರ ಠಾಣೆಯ ಇನ್ಸ್ ಪೆಕ್ಟರ್ ಭರತ್ ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಕಾಸ್ತ್ರ ಜಪ್ತಿಗೆ ತೆರಳಿದ್ದಾಗ ಘಟನೆ ನಡೆದಿದೆ. ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ದಿನೇಶ್ ಯತ್ನಿಸಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಭರತ್ ಫೈರಿಂಗ್ ಮಾಡಿದ್ದಾರೆ.

ರೌಡಿಶೀಟರ್ ಹಲ್ಲೆಯಿಂದ ಕಾನ್ಸ್ ಟೇಬಲ್ ವಸಂತ್ ಗಾಯಗೊಂಡಿದ್ದಾರೆ. ಗಾಯಗೊಂಡ ರೌಡಿಶೀಟರ್ ಮತ್ತು ಕಾನ್ಸ್ ಟೇಬಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಚ್ 20ರಂದು ರವಿವರ್ಮ ಅಲಿಯಾಸ್ ಅಪ್ಪು ಕೊಲೆಯಾಗಿದ್ದು, ಮಾರ್ಚ್ 24ರಂದು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎ1 ಆರೋಪಿ ದಿನೇಶ್ ಜೊತೆಗೆ ಘಟನೆ ಸ್ಥಳಕ್ಕೆ ತೆರಳಿದಾಗ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರದಿಂದ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಫೈರಿಂಗ್ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img