Tuesday, May 11, 2021
Homeದೆಹಲಿ18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ :ಸಿಎಂ ಕೇಜ್ರಿವಾಲ್

ಇದೀಗ ಬಂದ ಸುದ್ದಿ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ :ಸಿಎಂ ಕೇಜ್ರಿವಾಲ್

ನವದೆಹಲಿ: ‘ದೆಹಲಿ ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಉಚಿತವಾಗಿ ಕೋವಿಡ್ 19 ಲಸಿಕೆಗಳನ್ನು ನೀಡಲಾಗುತ್ತಿದ್ದು, ಈ ಸಂಬಂಧ 1.34 ಕೋಟಿ ಡೋಸ್‌ ಲಸಿಕೆಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಆನ್‌ಲೈನ್‌ ಮೂಲಕ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ‘ಲಸಿಕೆ ಖರೀದಿಸುವ ಮತ್ತು ಜನರಿಗೆ ತಲುಪಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗಿದೆ’ ಎಂದು ಹೇಳಿದರು.

ಇದೇ ವೇಳೆ ‘ದೇಶದಾದ್ಯಂತ ಕೋವಿಡ್‌ ಲಸಿಕೆಗೆ ಏಕರೂಪದ ದರ ನಿಗದಿಪಡಿಸಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಅವರು, ಲಸಿಕೆಗೆ ನಿಗದಿಪಡಿಸಿರುವ ದರವನ್ನು ಕಡಿಮೆಗೊಳಿಸುವಂತೆ ಕೇಳಿಕೊಂಡರು.

ಲಸಿಕೆಗಳಿಗೆ ವಿಧಿಸಿರುವ ದರವನ್ನು ಕಡಿಮೆಗೊಳಿಸುವಂತೆ ಲಸಿಕೆ ತಯಾರಕರಲ್ಲೂ ಮನವಿ ಮಾಡಿದ ಕೇಜ್ರಿವಾಲ್ ಅವರು, ಲಸಿಕೆ ಮಾರಾಟದಿಂದ ಲಾಭ ಪಡೆಯುವ ಬದಲು ಮಾನವೀಯತೆ ಮೆರೆಯುವಂತೆ ಕೇಳಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img