Monday, May 10, 2021
Homeಸುದ್ದಿ ಜಾಲಕೊರೊನಾ ಮಹಾಸ್ಪೋಟದ ಹಿನ್ನೆಲೆ : ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಐದು ಮಂದಿಗಷ್ಟೇ ಅವಕಾಶ

ಇದೀಗ ಬಂದ ಸುದ್ದಿ

ಕೊರೊನಾ ಮಹಾಸ್ಪೋಟದ ಹಿನ್ನೆಲೆ : ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಐದು ಮಂದಿಗಷ್ಟೇ ಅವಕಾಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟದ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಹೌದು, ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ ಮಾಡಲಾಗಿದೆ. ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿನಿನ್ನೆ ಕೊರೋನಾ ಮಹಾಸ್ಪೋಟವೇ ಉಂಟಾಗಿದ್ದು, ಇನ್ನೂ, ಹೊಸದಾಗಿ ರಾಜ್ಯಾಧ್ಯಂತ 34,804 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 143 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ 143 ಮಂದಿ ಬಲಿಯಾಗಿದ್ದಾರೆ.

ಬೆಂಗಳೂರು ನಗರದಲ್ಲಿ 77 ಸೋಂಕಿತರು ಸೇರಿದಂತೆ, ರಾಜ್ಯಾಧ್ಯಂತ 143 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 14426 ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,ಬೆಂಗಳೂರು ನಗರದಲ್ಲಿ 20,733 ಜನರು ಸೇರಿದಂತೆ ರಾಜ್ಯಾಧ್ಯಂತ 34804 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1339201 ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img