Tuesday, May 18, 2021
Homeಅಂತರ್ ರಾಜ್ಯಉದ್ದೇಶಪೂರ್ವಕ ಭಯ ಸೃಷ್ಟಿಸುವವರ ವಿರುದ್ಧ ಕ್ರಮ: ಸಿಎಂ ಆದಿತ್ಯನಾಥ್‌

ಇದೀಗ ಬಂದ ಸುದ್ದಿ

ಉದ್ದೇಶಪೂರ್ವಕ ಭಯ ಸೃಷ್ಟಿಸುವವರ ವಿರುದ್ಧ ಕ್ರಮ: ಸಿಎಂ ಆದಿತ್ಯನಾಥ್‌

ಲಖನೌ: ‘ರಾಜ್ಯದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಈ ರೀತಿಯ ಭಯ ಹುಟ್ಟಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಆಮ್ಲಜನಕ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಅವರು ಈ ಹೇಳಿಕೆ ನೀಡಿದ್ದಾರೆ.

‘ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ದಾರಿಗೆಳೆಯುವ ಸಂದೇಶಗಳನ್ನು ಬಿತ್ತರಿಸಲಾಗುತ್ತಿದೆ. ಇಂತಹ ಜನರನ್ನು ಗುರುತಿಸುವ ಕಾರ್ಯ ನಡೆಯಬೇಕಾಗಿದೆ. ಪ್ರಸ್ತುತ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ’ ಎಂದು ರಾಮಚರಿತ ಮಾನಸದಲ್ಲಿನ ಕೆಲವು ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

‘ಕೋವಿಡ್‌-19ನಿಂದ ಸಾವಿಗೀಡಾಗುವವರ ಅಂತ್ಯಕ್ರಿಯೆ ನಡೆಸಲು ಯಾವುದೇ ರೀತಿ ಶುಲ್ಕ ಪಡೆಯುವುದಿಲ್ಲ. ರಾಜ್ಯದಲ್ಲಿನ ಆಮ್ಲಜನಕ ಲಭ್ಯತೆಯ ಬಗ್ಗೆ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಆದರೆ,ಕೆಲವರು ಕಾಳಸಂತೆಯಲ್ಲಿ ಆಮ್ಲಜನಕ ಮಾರಾಟ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದು ದೂರಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img