Tuesday, May 11, 2021
Homeಸುದ್ದಿ ಜಾಲರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದುಉ, ಮುಂದಿನ 5 ದಿನ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಏಪ್ರೀಲ್ 29, 30 ರಂದು ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img