Tuesday, May 11, 2021
Homeಸುದ್ದಿ ಜಾಲಸೂರತ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 4 ಕೊರೊನಾ ರೋಗಿಗಳು ಸಾವು!

ಇದೀಗ ಬಂದ ಸುದ್ದಿ

ಸೂರತ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 4 ಕೊರೊನಾ ರೋಗಿಗಳು ಸಾವು!

ಸೂರತ್, ಏ. 26: ಆಯುಷ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಕೊರೊನಾವೈರಸ್ ರೋಗಿಗಳು ಪ್ರಾಣ ಬಿಟ್ಟಿರುವ ಘಟನೆ ಸೂರತ್‌ನಲ್ಲಿ ಭಾನುವಾರ ನಡೆದಿರುವುದು ಬೆಳಕಿಗೆ ಬಂದಿದೆ.

ಭಾನುವಾರ ರಾತ್ರಿ ಸೂರತ್‌ನಲ್ಲಿ ಆಯುಷ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಎಲ್ಲ ರೋಗಿಗಳನ್ನು ಎಸ್‌ಎಂಐಎಂಇಆರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸೂರತ್ ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ವೈದ್ಯಕೀಯ ಅಧಿಕಾರಿ ಡಾ. ಆಶಿಶ್ ನಾಯ್ಕ್ ತಿಳಿಸಿದ್ದಾರೆ.

ಸೂರತ್ ಆಸ್ಪತ್ರೆಯ ಐದನೇ ಅಂತಸ್ತಿನಲ್ಲಿ 10 ಮಂದಿ ಕೊವಿಡ್-19 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ವಾರ ಮಹಾರಾಷ್ಟ್ರದ ಪಾಲ್ಘರ್ ಕೊರೊನಾವೈರಸ್ ಕೇರ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 15 ಮಂದಿ ರೋಗಿಗಳು ಮೃತಪಟ್ಟಿದ್ದರು.

ಗುಜರಾತ್ನಲ್ಲಿ ಕೊರೊನಾವೈರಸ್ ಕಂಡೀಷನ್:

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,96,033ಕ್ಕೆ ಏರಿಕೆಯಾಗಿದ್ದು, ಈವರೆಗು 14296 ಮಂದಿ ಮಹಾಮಾರಿಯಿಂದಲೇ ಪ್ರಾಣ ಬಿಟ್ಟಿದ್ದಾರೆ. 3,74,699 ಸೋಂಕಿತರು ಗುಣಮುಖರಾಗಿದ್ದರೆ, ಉಳಿದಂತೆ 1,15,006 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img