Tuesday, May 11, 2021
Homeಸುದ್ದಿ ಜಾಲಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೆ ಸಾವು..!

ಇದೀಗ ಬಂದ ಸುದ್ದಿ

ಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೆ ಸಾವು..!

ಬೇಲೂರು  : ಬಸ್ಸು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ 3.30 ರ ಸಮಯದಲ್ಲಿ ಬಾಗೆ ಮತ್ತು ಸಕಲೇಶಪುರ ಮಾರ್ಗ ಮದ್ಯದಲ್ಲಿ ನಡೆದಿದೆ.

 ಮೃತರನ್ನು ಬೇಲೂರು ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದ ಪ್ರದೀಪ ( 24) ಎಂದು ಗುರುತಿಸಲಾಗಿದೆ. ಸಕಲೇಶಪುರದಿಂದ ಹೊಸಕೋಟೆ ಕಡೆಗೆ ಹೋಗುತ್ತಿದ್ದ ಸರ್ಕಾರಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಸಕಲೇಶಪುರದಿಂದ ಭಾಗೆ ಮಾರ್ಗವಾಗಿ ಗುಮ್ಮನಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿದ್ದು , ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹಿಡಿದಿರಬಹುದು ಎಂದು ಶಂಕಿಸಲಾಗಿದೆ . ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರದೀಪ ಸ್ಥಳದಲ್ಲೆ ಮೃತಪಟ್ಟಿರುತ್ತಾರೆ.

ಸಕಲೇಶಪುರ ಪೋಲೀಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವಾದ ಬಸ್ಸನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img