Monday, May 10, 2021
Homeಕೋವಿಡ್-19ವಾಜಪೇಯಿ ಸೋದರ ಸೊಸೆ, ಮಾಜಿ ಸಂಸದೆ ಕರುಣಾ ಶುಕ್ಲಾ ಕೋವಿಡ್ ಗೆ ಬಲಿ

ಇದೀಗ ಬಂದ ಸುದ್ದಿ

ವಾಜಪೇಯಿ ಸೋದರ ಸೊಸೆ, ಮಾಜಿ ಸಂಸದೆ ಕರುಣಾ ಶುಕ್ಲಾ ಕೋವಿಡ್ ಗೆ ಬಲಿ

ರಾಯ್ಪುರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡೆ ಕರುಣಾ ಶುಕ್ಲಾ ಮಂಗಳವಾರ ಬೆಳಗ್ಗೆ ಕೋವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.

ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದರು. 

ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶುಕ್ಲಾ, ಮೂರು ದಶಕ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2018ರ ಛತ್ತೀಸ್​ಗಢ ವಿಧಾನಸಭೆ ಚುನಾವಣೆಯಲ್ಲಿ ರಾಜನಂದಗಾಂವ್ ಕ್ಷೇತ್ರದಲ್ಲಿ ಮಾಜಿ ಸಿಎಂ ರಮಣ್ ಸಿಂಗ್ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

ಕರುಣಾ ಶುಕ್ಲಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಛತ್ತೀಸ್​ಗಢ ಸಿಎಂ ಭೂಪೇಶ್​ ಬಾಘೇಲ್, ನನ್ನ ಪಾಲಿಗೆ ತಾಯಿಯಂತಿದ್ದ ಕರುಣಾ ಶುಕ್ಷಾ ಅವರ ನಿಧನ ಸುದ್ದಿ ಕೇಳಿ ಆಘಾತವಾಯಿತು. ನಿರ್ದಯಿ ಕರೊನಾ… ಎಂದು ಟ್ವೀಟ್​ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img