Tuesday, May 18, 2021
Homeಬೆಂಗಳೂರುಕಾಂಗ್ರೆಸ್​​ನಿಂದ ರಾಜ್ಯಮಟ್ಟದ ಕೋವಿಡ್​ ಸೆಂಟರ್ ರಚಿಸುತ್ತೇವೆ: ಡಿ.ಕೆ ಶಿ

ಇದೀಗ ಬಂದ ಸುದ್ದಿ

ಕಾಂಗ್ರೆಸ್​​ನಿಂದ ರಾಜ್ಯಮಟ್ಟದ ಕೋವಿಡ್​ ಸೆಂಟರ್ ರಚಿಸುತ್ತೇವೆ: ಡಿ.ಕೆ ಶಿ

ಬೆಂಗಳೂರು: ಕಾಂಗ್ರೆಸ್​​ನಿಂದ ರಾಜ್ಯಮಟ್ಟದ ಕೋವಿಡ್​ ಸೆಂಟರ್ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಆಗುತ್ತಿಲ್ಲ ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ಯಾವ ರೀತಿ ಜವಾಬ್ದಾರಿ ನಿಭಾಯಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲಾ ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು ಎಂದು ನಮ್ಮ ನಾಯಕರಿಗೆ ಸಲಹೆ ನೀಡಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿ ಏಕಾಏಕಿಯಾಗಿ ಲಾಕ್​​ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ, ಹೀಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಬೇಕು. ಈ ಬಗ್ಗೆ ಯಾವ ರೀತಿ ಒತ್ತಾಯ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಇಂತಹ ಸಮಯದಲ್ಲಿ ಅಕ್ಕಿ ಪ್ರಮಾಣ ಕಡಿತ ಮಾಡಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇದಕ್ಕಿಂತ ದುರಂತಕ್ಕೆ ‌ಮತ್ತೊಂದಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img