Tuesday, May 11, 2021
Homeಕೋವಿಡ್-19ವಿಧಾನಸಭಾ ಸ್ಪೀಕರ್ ಕಾಗೇರಿಗೆ ಕೊರೊನಾ ; ಶೀಘ್ರ ಗುಣಮುಖವಾಗಲೆಂದು ಹಾರೈಸಿದ ಸಿಎಂ

ಇದೀಗ ಬಂದ ಸುದ್ದಿ

ವಿಧಾನಸಭಾ ಸ್ಪೀಕರ್ ಕಾಗೇರಿಗೆ ಕೊರೊನಾ ; ಶೀಘ್ರ ಗುಣಮುಖವಾಗಲೆಂದು ಹಾರೈಸಿದ ಸಿಎಂ

ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, “ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img