Monday, May 10, 2021
Homeಕೋವಿಡ್-19ಮಹಾಮಾರಿ ಕೊರೊನಾಗೆ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ

ಬೆಂಗಳೂರು, ಎ. 28: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ರವರ ಆರೋಗ್ಯ ಕಳೆದ ಐದು ದಿನಗಳಿಂದ ತುಂಬಾ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ.

ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಸಂದರ್ಶನದಲ್ಲಿ ಹಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡಿದ್ದರು. ತಂದೆ ಹಾಕಿಕೊಟ್ಟ ಮಾರ್ಗದಲ್ಲಿ ಬದುಕು ಕಟ್ಟಿಕೊಂಡಿದ್ದೇವೆ. ಪುಟ್ಟಣ್ಣ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸಮಾರಂಭಕ್ಕೆ ಸೌಜನ್ಯಕ್ಕೂ ನಮ್ಮ ಕುಟುಂಬಕ್ಕೆ ಆಹ್ವಾನ ನೀಡಲ್ಲ ಎಂದು ಚಿತ್ರರಂಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img