Monday, May 10, 2021
Homeಸುದ್ದಿ ಜಾಲಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ!

ಇದೀಗ ಬಂದ ಸುದ್ದಿ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ!

ಹುಬ್ಬಳ್ಳಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ (67) ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಭೀಮಪ್ಪ ಅಂದು ರಾತ್ರಿ ವಾರ್ಡನ್ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img