Tuesday, May 11, 2021
Homeಅಂತರ್ ರಾಜ್ಯಮಹಾರಾಷ್ಟ್ರದ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ರೋಗಿಗಳ ಸಾವು

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ರೋಗಿಗಳ ಸಾವು

ಥಾಣೆ(ಮಹಾರಾಷ್ಟ್ರ): ಆಸ್ಪತ್ರೆಗಳಲ್ಲಿ ಬೆಂಕಿ ದುರಂತ ಪ್ರಕರಣ ಮುಂದುವರಿಯುತ್ತಲೇ ಇದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾದಲ್ಲಿರುವ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ನಸುಕಿನ ಜಾವ ಬೆಂಕಿ ಅವಘಡ ಉಂಟಾಗಿದೆ.

ತಕ್ಷಣವೇ ಬೇರೆ ಆಸ್ಪತ್ರೆಗೆ ರೋಗಿಗಳನ್ನು ಸಾಗಿಸುವಾಗ ನಾಲ್ವರು ಮೃತಪಟ್ಟಿದ್ದಾರೆ ಎಂದು ಥಾಣೆ ನಗರ ಪಾಲಿಕೆ ತಿಳಿಸಿದೆ. ಸದ್ಯ ಎರಡು ಅಗ್ನಿಶಾಮಕ ವಾಹನಗಳು ಮತ್ತು ಇತರ ರಕ್ಷಣಾ ವಾಹನಗಳು ಸ್ಥಳದಲ್ಲಿದ್ದು ಬೆಂಕಿ ನಂದಿಸುವ ಮತ್ತು ರೋಗಿಗಳನ್ನು ಕಾಪಾಡುವ ಕೆಲಸ ಮುಂದುವರಿದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img