Tuesday, May 18, 2021
Homeಸುದ್ದಿ ಜಾಲಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗನ್‍ಮ್ಯಾನ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗನ್‍ಮ್ಯಾನ್ ಕೊರೊನಾಗೆ ಬಲಿ

ಬೆಂಗಳೂರು, ಎ.28: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್‍ಮ್ಯಾನ್ ಕೋವಿಡ್‍ಗೆ ಬಲಿಯಾಗಿದ್ದಾರೆ.

ಹತ್ತು ವರ್ಷದಿಂದ ಸತೀಶ್ ಜಾರಕಿಹೊಳಿ ಅವರ ಗನ್‍ಮ್ಯಾನ್ ಆಗಿದ್ದ ರಮೇಶ್(42) ಅವರು ಚಿಕಿತ್ಸೆ ಫಲಿಸದೆ ನಗರದಲ್ಲಿ ಕೊರೋನಗೆ ಬಲಿಯಾಗಿದ್ದಾರೆ.

ಕೊರೋನ ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಬುಧವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ಬಂದಾಗಲೆಲ್ಲ ಅವರಿಗೆ ಗನ್‍ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img