Tuesday, May 11, 2021
Homeಕೋವಿಡ್-19ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ಇಂದು ನಿರ್ಮಾಪಕ ಚಂದ್ರಶೇಖರ್ ಮೃತಪಟ್ಟಿದ್ದಾರೆ. ‘ಅಣ್ಣಯ್ಯ’, ‘ಬಿಂದಾಸ್’, ‘ರನ್ನ’ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರಿಗೆ 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖರಾಗಿ ಮನೆಗೆ ಮರಳಿದ್ದ ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img