Tuesday, May 18, 2021
Homeಸುದ್ದಿ ಜಾಲಬೆಂಗಳೂರಿನಲ್ಲಿ ಒಂದೇ ದಿನ 31 ಮಂದಿ ಪೊಲೀಸರಲ್ಲಿ ಕೊರೊನಾ

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ ಒಂದೇ ದಿನ 31 ಮಂದಿ ಪೊಲೀಸರಲ್ಲಿ ಕೊರೊನಾ

ಬೆಂಗಳೂರು : ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ನಗರದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಸಿಬ್ಬಂದಿ ಸೇರಿ ಒಂದೇ ದಿನ 31 ಮಂದಿ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಇನ್ನು ಈವರೆಗೆ ಒಟ್ಟು 688 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 112 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 28 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 541 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 39047 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 229 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img