Monday, May 10, 2021
Homeಸುದ್ದಿ ಜಾಲಕೇರಳದಲ್ಲಿ ಒಂದೇ ದಿನ ಬರೋಬ್ಬರಿ 35 ಸಾವಿರ ಕೊರೊನಾ ಸೋಂಕಿತರು ಪತ್ತೆ!

ಇದೀಗ ಬಂದ ಸುದ್ದಿ

ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 35 ಸಾವಿರ ಕೊರೊನಾ ಸೋಂಕಿತರು ಪತ್ತೆ!

ತಿರುವನಂತಪುರಂ, ಏ.  29: ಕೇರಳದಲ್ಲಿ ಬರೋಬ್ಬರಿ 35 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ, ಬ್ರಿಟನ್‍ ನಿಂದ ಇತ್ತೀಚೆಗೆ ಕೇರಳಕ್ಕೆ ಆಗಮಿಸಿದ ಯಾವುದೇ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿಲ್ಲ. ಇವರಲ್ಲಿ ಒಟ್ಟು 116 ಜನರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಣುಶಾಸ್ತ್ರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ ಬ್ರಿಟನ್‍ ನಿಂದ ಆಗಮಿಸಿದ 11 ಜನರಲ್ಲಿ ರೂಪಾಂತರ ವೈರಸ್‍ ಇರುವುದು ಪತ್ತೆಯಾಗಿದೆ ಎಂದು ಪಿಣರಾಯ್ ವಿಜಯನ್ ಅವರು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳದಲ್ಲಿ ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 35,013 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 35,013 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 41 ಸೋಂಕಿತರು ಮೃತಪಟ್ಟಿದ್ದಾರೆ. 15,505 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 3293 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಗುಣಮುಖರಾದವರ ಸಂಖ್ಯೆ 2,61,162ರಷ್ಟಿದೆ.

ಮಂಗಳವಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿತ್ತು. ಸೋಮವಾರಕ್ಕೆ ಹೋಲಿಸಿದರೆ ಸುಮಾರು 20 ಸಾವಿರ ಕಡಿಮೆ ಪ್ರಕರಣಗಳು ದಾಖಲಾಗಿದ್ದವು. ಆದರೆ ಮತ್ತೆ ಪ್ರಕರಣಗಳು ಏರುಗತಿಯತ್ತ ಸಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ದೇಶದಲ್ಲಿನ ಕೊರೊನಾ ಪ್ರಕರಣಗಳ ಕುರಿತು ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಪ್ರಕರಣಗಳೊಂದಿಗೆ ಒಟ್ಟಾರೆ ಪ್ರಕರಣಗಳ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 29,78,709 ಆಗಿದೆ.

ಇದುವರೆಗೂ ಸೋಂಕಿನಿಂದ 1,48,17,371 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,01,187 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 27ರವರೆಗೆ 14,78,27,367 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img