Tuesday, May 18, 2021
Homeಸುದ್ದಿ ಜಾಲಗುಡ್ ನ್ಯೂಸ್ : ಪೋಸ್ಟ್‌ ಆಫೀಸ್‌ ನಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕರ 4368...

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ : ಪೋಸ್ಟ್‌ ಆಫೀಸ್‌ ನಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕರ 4368 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಬಿಹಾರ ಮತ್ತು ಮಹಾರಾಷ್ಟ್ರ ವಲಯಗಳಲ್ಲಿ ಗ್ರಾಮೀಣ ಡಾಕ್ ಸೇವಕರ 4368 ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 10ನೇ ಕ್ಲಾಸ್‌ ಪಾಸ್‌ ಆದಾ ಯುವಕರು ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂದ್ಹಾಗೆ, ಏಪ್ರಿಲ್ 27, 2021 ರಿಂದ ಆನ್ಲೈನ್ ಅರ್ಜಿಗಳು ಪ್ರಾರಂಭವಾಗ್ತಿದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಎಷ್ಟು ಹುದ್ದೆಗಳು..?
ಹೊರಡಿಸಿದ ಅಧಿಸೂಚನೆಯ ಪ್ರಕಾರ, ಬಿಹಾರದಲ್ಲಿ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಒಟ್ಟು 1940 ಮತ್ತು ಮಹಾರಾಷ್ಟ್ರದಲ್ಲಿ 2428 ಹುದ್ದೆಗಳನ್ನ ನೇಮಕ ಮಾಡಿಕೊಳ್ಳಲಾಗುವುದು. ಎರಡೂ ರಾಜ್ಯಗಳಲ್ಲಿ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಪ್ರಮುಖ ನೇಮಕಾತಿ ದಿನಾಂಕಗಳು..!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಏಪ್ರಿಲ್ 27, 2021 ಆಗಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮೇ 26, 2021 ಆಗಿದೆ. ಎಲ್ಲಾ ಅಭ್ಯರ್ಥಿಗಳು ಮೇ 26ರೊಳಗೆ ತಮ್ಮ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ಠೇವಣಿ ಮಾಡಿದ ನಂತರವೇ ಫಾರ್ಮ್ ಪೂರ್ಣಗೊಳ್ಳುತ್ತದೆ.

ಶೈಕ್ಷಣಿಕ ಅರ್ಹತೆಗಳು ಮತ್ತು ವಯಸ್ಸಿನ ಮಿತಿಗಳು..!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರೌಢ ಶಾಲೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ಇಂಗ್ಲಿಷ್ ವಿಷಯಗಳನ್ನು ಹೊಂದಿರಬೇಕು. 18 ರಿಂದ 40 ವರ್ಷದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಪಡೆಯುತ್ತಾರೆ.

ಅರ್ಜಿ ಶುಲ್ಕ..!
ಸಾಮಾನ್ಯ ಮತ್ತು ಒಬಿಸಿ ವರ್ಗಕ್ಕೆ ಅರ್ಜಿ ಶುಲ್ಕ 100ರೂ. ಎಸ್ಸಿ, ಎಸ್ಟಿ, ದಿವ್ಯಾಂಗ ಮತ್ತು ಎಲ್ಲಾ ವರ್ಗದ ಮಹಿಳೆಯರಿಗೆ ಅರ್ಜಿ ಉಚಿತವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ..?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ ಎಲ್ಲಾ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ https://www.indiapost.gov.in ಅಧಿಕೃತ ವೆಬ್ ಸೈಟ್ʼಗೆ ಭೇಟಿ ಮಾಡಬೇಕಾಗುತ್ತದೆ. ಇಲ್ಲಿ ಅವರು ಅರ್ಜಿ ನಮೂನೆ ಮತ್ತು ಇತರ ಮಾಹಿತಿಯನ್ನ ಭರ್ತಿ ಮಾಡುವ ಮಾರ್ಗವನ್ನ ಕಂಡುಕೊಳ್ಳುತ್ತಾರೆ. ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನ ಸಂಪೂರ್ಣವಾಗಿ ಓದಬೇಕು. ಯಾಕಂದ್ರೆ, ಅರ್ಜಿ ನಮೂನೆಯು ದೋಷವಾಗಿದ್ದರೆ ಇದನ್ನು ರದ್ದುಗೊಳಿಸಬಹುದು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img