Monday, May 10, 2021
Homeಬೆಂಗಳೂರುಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಇದೀಗ ಬಂದ ಸುದ್ದಿ

ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಯನ್ನ ಬಂಧನ ಮಾಡುವಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೋಲಿಸರು ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ನಲ್ಲೂರು ಮೂಲದ ಕಲ್ಲಪಲ್ಲಿ ನಾಗೇಂದ್ರ (39) ಬಂಧಿತ ಆರೋಪಿಯಾಗಿದ್ದು, ಈತನಿಂದ 91,30,000 ರೂ ಬೆಳೆಬಾಳುವ 104 ಕೆಜಿ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಟೊಯೋಟಾ ಇಟಿಯಸ್ ಕಾರು, ಓಪ್ಪೋ ಮೊಬೈಲ್ ಅನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ನಾಗೇಂದ್ರ ಆಂಧ್ರಪ್ರದೇಶದ ವೈಜಾಕ್ ಜಿಲ್ಲೆಯ ಚಿಂತಾಪಲ್ಲಿ ಅರಣ್ಯ ಪ್ರದೇಶದಿಂದ ಗಾಂಜಾವನ್ನು ಅಕ್ರಮವಾಗಿ ತೆಗೆದುಕೊಂಡು ಬಂದು ಮಾರಾಟ ದಂಧೆಯಲ್ಲಿ ತೊಡಗಿದ್ದ. ಕೋವಿಡ್ ಲಾಕ್ ಡೌನ್ ಸಮಯ ಅದ್ದರಿಂದ ಹೆಚ್ಚಿನ ಬೆಲೆಗೆ ಗಾಂಜಾ ಮಾರಾಟ ಮಾಡಿ ಒಳ್ಳೆಯ ಹಣ ಸಂಪಾದನೆ ಮಾಡಬಹುದು ಎಂದು ಆರೋಪಿ ಎಲೆಕ್ಟ್ರಾನಿಕ್ ಸಿಟಿಯ ಡಿ ಮಾರ್ಟ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಎಲೆಕ್ಟ್ರಾನಿಕ್ ಸಿಟಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ಮಾಲಿನ ಸಮೇತವಾಗಿ ಆರೋಪಿಯನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img