Monday, May 10, 2021
Homeರಾಜ್ಯರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಅಂದರೆ ಮೇ. 3 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 5 ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img