Tuesday, May 18, 2021
Homeಅಂತರ್ ರಾಜ್ಯಕೊರೊನಾ ಗೆದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ಇದೀಗ ಬಂದ ಸುದ್ದಿ

ಕೊರೊನಾ ಗೆದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ನವದೆಹಲಿ: ಕರೊನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏಪ್ರಿಲ್‌ 19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.

ಮನಮೋಹನ್​ ಸಿಂಗ್ ಅವರು ಕಳೆದ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಕರೊನಾ ವೈರಸ್ ಹಾಗೂ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದರು. ಕರೊನಾ ಲಸಿಕೆ, ಲಸಿಕೆ ವಿತರಣೆ ಕುರಿತು ಪಾರದರ್ಶಕತೆ ಬೇಕು ಎಂದು ಪತ್ರದಲ್ಲಿ ಹೇಳಿದ್ದರು.

ಇದಾದ ಬೆನ್ನಲ್ಲೇ ಅವರಿಗೆ ಕರೊನಾ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಇದೀಗ ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ.

2009 ರಲ್ಲಿ ಎರಡನೇ ಬಾರಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಿಂಗ್​ ಅವರನ್ನು, ಕಳೆದ ವರ್ಷ ಮೇ ತಿಂಗಳಲ್ಲಿ ಸಹ ಎದೆನೋವು ಉಂಟಾದ ಹಿನ್ನೆಲೆಯಲ್ಲಿ ಏಮ್ಸ್​ ಆಸ್ಪತ್ರೆಗೆ ಸೇರಿಸಲಾಗಿತ್ತು ಎನ್ನಲಾಗಿದೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img