Monday, May 10, 2021
Homeರಾಜ್ಯಕರ್ನಾಟಕದಲ್ಲಿ ಮೇ 1ರಿಂದ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಇಲ್ಲ

ಇದೀಗ ಬಂದ ಸುದ್ದಿ

ಕರ್ನಾಟಕದಲ್ಲಿ ಮೇ 1ರಿಂದ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಇಲ್ಲ

ಬೆಂಗಳೂರು, ಏ. 30: ಮೇ 1ರಿಂದ ಕರ್ನಾಟಕದಲ್ಲಿ 18 ವರ್ಷದ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಿಸಲಾಗುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೌದು ಕೇಂದ್ರದಿಂದ ಕೊರೊನಾ ಲಸಿಕೆ ಸರಬರಾಜಾಗದ ಕಾರಣ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ 45 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ವಿತರಣಾ ಅಭಿಯಾನ ಮುಂದುವರೆಯಲಿದೆ ಎನ್ನಲಾಗಿದೆ.

ಆದರೆ ಕೋವಿನ್ ಅಪ್ಲಿಕೇಷನ್‌ನಲ್ಲಿ ನೋಂದಣಿ ಮುಂದುವರೆದಿದೆ, 18-44 ವರ್ಷದೊಳಗಿನವರು ನಾಳೆಯಿಂದ ಆಸ್ಪತ್ರೆಗೆ ಹೋಗಬೇಡಿ, ಲಸಿಕೆ ಸರಬರಾಜು ಆದ ಬಳಿಕ ನಾವೇ ಮಾಹಿತಿ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ.

ನಿನ್ನೆಯೇ ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಿತ್ತು. ರಾಜ್ಯದಲ್ಲಿ ನಿತ್ಯ 100 ರಿಂದ 200 ಮಂದಿ ಕೊರೊನಾ ಸೋಂಕಿನಿಂದ ಮೃತಪಡುತ್ತಿದ್ದಾರೆ. 23 ಜಾಗವನ್ನು ತಾತ್ಕಾಲಿಕ ಚಿತಾಗಾರವನ್ನಾಗಿ ನಿರ್ಮಿಸಲಾಗಿದೆ.

ಹೆಚ್ಚು ಕೊರೊನಾ ಲಸಿಕೆಗಳು ಬಂದಾಗ ಮಾತ್ರ 18 ರಿಂದ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಗುತ್ತದೆ. ಮೇ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಎಂದಿನಂತೆ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ 24 ಗಂಟೆಯಲ್ಲಿ 35024 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 270 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಹೇಳಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 14,74,846ಕ್ಕೆ ಏರಿಕೆಯಾಗಿದೆ.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಆಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 270 ಜನರ ಮೃತಪಟ್ಟಿದ್ದು, ಐಸಿಯುನಲ್ಲಿ 2431 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 14,142 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 1110025 ಆಗಿದೆ.

24 ಗಂಟೆಯಲ್ಲಿ 15118 ಆಂಟಿಜೆನ್, 160698 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 175816 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ 25407198 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img