Tuesday, May 18, 2021
Homeಸುದ್ದಿ ಜಾಲಬೆಳಗ್ಗೆ 6ರಿಂದ ಸಂಜೆ 8ರವರೆಗೆ ನಂದಿನಿ ಹಾಲಿನ ಮಳಿಗೆ ತೆರೆಯಲು ಸರ್ಕಾರ ಸೂಚನೆ

ಇದೀಗ ಬಂದ ಸುದ್ದಿ

ಬೆಳಗ್ಗೆ 6ರಿಂದ ಸಂಜೆ 8ರವರೆಗೆ ನಂದಿನಿ ಹಾಲಿನ ಮಳಿಗೆ ತೆರೆಯಲು ಸರ್ಕಾರ ಸೂಚನೆ

ಬೆಂಗಳೂರು, ಏ. 30: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.

ಕರ್ನಾಟಕದಲ್ಲಿ 24 ಗಂಟೆಯಲ್ಲಿ 35024 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 270 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಹೇಳಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 14,74,846ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಆಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 270 ಜನರ ಮೃತಪಟ್ಟಿದ್ದು, ಐಸಿಯುನಲ್ಲಿ 2431 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img