Monday, May 10, 2021
Homeಸುದ್ದಿ ಜಾಲಮೇ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

ಇದೀಗ ಬಂದ ಸುದ್ದಿ

ಮೇ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

ಕೋವಿಡ್-19 ಸೋಂಕಿನ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ಮೇ 31ರವರೆಗೆ ವಿಸ್ತರಿಸಿರುವುದಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಪ್ರಕಟಣೆ ಹೊರಡಿಸಿದೆ.

ಕಳೆದ ಒಂದು ವಾರದಲ್ಲಿ ದೇಶದಲ್ಲಿ ಪ್ರತಿದಿನ 3,00,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ವೈರಸ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಈ ನಿರ್ಬಂಧ ಹೇರಲಾಗಿದೆ. ಆದರೆ ಅಂತರರಾಷ್ಟ್ರೀಯ ಕಾರ್ಗೊ ವಿಮಾನಗಳ ಹಾರಾಟಕ್ಕೆ ಅನ್ವಯವಾಗುವುದಿಲ್ಲ.

”ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು” ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಅಂದರೆ, ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿಸಬಹುದು ಎಂದು ಅದು ಹೇಳಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img