Monday, May 10, 2021
Homeಸುದ್ದಿ ಜಾಲಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI' ನಲ್ಲಿ ಖಾಲಿ ಇರುವ 5000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI’ ನಲ್ಲಿ ಖಾಲಿ ಇರುವ 5000 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ದೇಶಾದ್ಯಂತ 18 ವಿವಿಧ ವಲಯಗಳಲ್ಲಿ ಕ್ಲರಿಕಲ್ ಕೇಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 5000 ಹುದ್ದೆಗಳಿಗೆ ಅಧಿಸೂಚನೆ ನೀಡಲಾಗಿದೆ. ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 27, 2021 ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2021. ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು sbi.co.in ಎಸ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ಕೇಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಆಗಿ ನೇಮಕ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಒಂದು ರಾಜ್ಯದಲ್ಲಿ ಮಾತ್ರ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಒಂದು ನಿರ್ದಿಷ್ಟ ರಾಜ್ಯದ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಆ ರಾಜ್ಯ/ಕೇಂದ್ರಾಡಳಿತ ಪ್ರದೇಶ/ವಿಶೇಷ ಪ್ರದೇಶದ ನಿರ್ದಿಷ್ಟ ಆಯ್ಕೆಮಾಡಿದ ಸ್ಥಳೀಯ ಭಾಷೆಯಲ್ಲಿ ಪರಿಣತಿ ಇರಬೇಕು ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

ಪ್ರಾಥಮಿಕ ಪರೀಕ್ಷೆಯನ್ನು ಜೂನ್ ನಲ್ಲಿ ತಾತ್ಕಾಲಿಕವಾಗಿ ನಡೆಸಲಾಗುತ್ತದೆ ಮತ್ತು ಮುಖ್ಯ ಪರೀಕ್ಷೆಯನ್ನು ಜುಲೈ 31, 2021 ರಂದು ನಡೆಸಲಾಗುತ್ತದೆ.

ಅರ್ಜಿ ಶುಲ್ಕ:

ಜನರಲ್/ಒಬಿಸಿ (OBC)/ಇಡಬ್ಲುಎಸ್ ಕೆಟಗರಿಗೆ 750 ರೂಪಾಯಿ

ಎಸ್ ಸಿ/ಎಸ್ ಟಿ/ ಪಿಡಬ್ಲುಡಿ ಕೆಟಗರಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಎಸ್ಬಿಐ ನೇಮಕಾತಿ 2021 – ಅಭ್ಯರ್ಥಿಯ ವಯಸ್ಸಿನ ಮಿತಿ:

ಅಭ್ಯರ್ಥಿಯು 01.04.2021 ರಂತೆ 20 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 28 ವರ್ಷಗಳಿಗಿಂತ ಮೇಲ್ಪಟ್ಟವರಾಗಿರಬಾರದು.

ಎಸ್ಬಿಐ ನೇಮಕಾತಿ 2021 – ಅಗತ್ಯ ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಯನ್ನು ಉತ್ತೀರ್ಣಗೊಳಿಸುವ ದಿನಾಂಕ 16.08.2021 ರಂದು ಅಥವಾ ಅದಕ್ಕೂ ಮೊದಲು ಇದೆ ಎಂದು ಖಚಿತಪಡಿಸಿಕೊಳ್ಳಬೇಕು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img