Tuesday, May 11, 2021
Homeಸುದ್ದಿ ಜಾಲವಿವಿಧ ಹುದ್ದೆಗಳಿಗೆ KPSC ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ವಿವಿಧ ಹುದ್ದೆಗಳಿಗೆ KPSC ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು, ಮೌಲಾನಾ ಆಜಾದ್ ಶಾಲೆಯ ಶಿಕ್ಷಕರು ಸೇರಿದಂತೆ 389 ಹುದ್ದೆಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಹೈದರಾಬಾದ್-ಕರ್ನಾಟಕ ವೃಂದದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 14 ಪರಿಸರ ಅಧಿಕಾರಿ ಹುದ್ದೆ, 4 ವೈಜ್ಞಾನಿಕ ಸಹಾಯಕರು, 1 ಪ್ರಥಮ ದರ್ಜೆ ಸಹಾಯಕ, ಮೌಲಾನಾ ಆಜಾದ್ ಮಾದರಿ ಶಾಲೆಗಳ 79 ಆಂಗ್ಲ ಶಿಕ್ಷಕರು, 39 ದೈಹಿಕ ಶಿಕ್ಷಕರು, ಭೂಮಾಪನ ಮತ್ತು ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆ ಸೇರಿದಂತೆ 389 ಹುದ್ದೆಗಳ ಆಯ್ಕೆಯ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಮೇ 15 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಆಕ್ಷೇಪಣೆಗಳನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯವರಿಗೆ ಲಿಖಿತವಾಗಿಯೂ ಸಲ್ಲಿಸಬಹುದು ಎಂದು ಹೇಳಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img