Tuesday, May 18, 2021
Homeಸುದ್ದಿ ಜಾಲಕೊರೋನಾ ಅಬ್ಬರ: ಮೇ.3 ರಂದು ಕಾಂಗ್ರೆಸ್ ಶಾಸಕರು, ಸಂಸದರ ಸಭೆ ಕರೆದ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ: ಮೇ.3 ರಂದು ಕಾಂಗ್ರೆಸ್ ಶಾಸಕರು, ಸಂಸದರ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟ ತೀವ್ರಗೊಂಡ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಶಾಸಕರು, ಸಂಸದರು ಹಾಗೂ ಪಕ್ಷದ ಪ್ರಮುಖರ ಸಭೆ ಕರೆದಿದ್ದಾರೆಂದು ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ 11 ಗಂಟೆ ಸಭೆ ನಡೆಯಲಿದ್ದು ವರ್ಚುವಲ್ ಮೂಲಕ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿ ಸರ್ಕಾರದ ಲೋಪದೋಷಗಳು ಹಾಗೂ ಅದನ್ನು ಸರಿಪಡಿಸುವ ಬಗ್ಗೆ ಅನುಸರಸಬೇಕಾದ ಕ್ರಮಗಳನ್ನು ಮತ್ತು ರಾಜ್ಯದ ಸದ್ಯದ ವಾಸ್ತವ ಸ್ಥಿತಿಯ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆಯನ್ನು ಕರೆಯಲಾಗಿದೆ.

ವಿಧಾನಸಭೆ, ಪರಿಷತ್ ಸದಸ್ಯರು, ಲೋಕಸಭಾ ರಾಜ್ಯಸಭೆ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಸರ್ಕಾರವನ್ನು ಯಾವ ರೀತಿಯಲ್ಲಿ ತರಾಟೆಗೆ ತೆಗೆದುಕೊಳ್ಳಬೇಕು ಹಾಗೂ ಯಾವುದೆಲ್ಲಾ ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರವನ್ನು ಎಚ್ಚರಿಸಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img