Tuesday, May 11, 2021
Homeರಾಜ್ಯಕೊರೊನಾ ಹೆಚ್ಚಳ : ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ 'ಸಿಎಂ ಬಿ ಎಸ್ ವೈ'...

ಇದೀಗ ಬಂದ ಸುದ್ದಿ

ಕೊರೊನಾ ಹೆಚ್ಚಳ : ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ‘ಸಿಎಂ ಬಿ ಎಸ್ ವೈ’ ತುರ್ತು ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಡೆಗೆ ಸರ್ಕಾರ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆದರೆ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ಇಂದು ಸಂಜೆ 4:30 ಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಆಸ್ಪತ್ರೆ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಕೆಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ. .ಲಾಕ್‌ಡೌನ್‌ ಮಾಡಿದರೂ ಕರೊನಾ ನಿಯಂತ್ರಣಕ್ಕೆ ಸಿಗದಿರುವುದು, ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿದಷ್ಟು ಬೆಡ್ ಬಿಟ್ಟು ಕೊಡದಿರುವುದು ಸೇರಿ ಹಲವಾರು ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ಆಗಲಿದೆ.

ರಾಜ್ಯದ ಕೆಲವು ಆಸ್ಪತ್ರೆಗಳಲ್ಲಿ ಸೋಂಕಿತರು ಬೆಡ್, ಆಕ್ಸಿಜನ್ ಗಾಗಿ ಪರದಾಡುತ್ತಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ.ಇನ್ನೂ, ನಿನ್ನೆ ಬೆಂಗಳೂರು ನಗರದಲ್ಲಿ 26,756 ಜನರು ಸೇರಿದಂತೆ ರಾಜ್ಯಾಧ್ಯಂತ ಹೊಸದಾಗಿ 48,296 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1523142ಕ್ಕೆ ಏರಿಕೆಯಾಗಿದೆ. ಇವರಲ್ಲಿ ನಿನ್ನೆ 14884 ಸೇರಿದಂತೆ ಇದುವರೆಗೆ 1124909 ಸೋಂಕಿತರು. ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 382690 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img