Tuesday, May 18, 2021
Homeಸುದ್ದಿ ಜಾಲವಿಶ್ವ ಕಾರ್ಮಿಕ ದಿನಾಚರಣೆಗೆ ಮಾಜಿ ಸಿಎಂ ಹೆಚ್.ಡಿ.ಕೆ ಶುಭಾಶಯ

ಇದೀಗ ಬಂದ ಸುದ್ದಿ

ವಿಶ್ವ ಕಾರ್ಮಿಕ ದಿನಾಚರಣೆಗೆ ಮಾಜಿ ಸಿಎಂ ಹೆಚ್.ಡಿ.ಕೆ ಶುಭಾಶಯ

ಬೆಂಗಳೂರು ; ಇಂದು ವಿಶ್ವ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಕಾರ್ಮಿಕರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರ್ಮಿಕರಿಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಉಣ್ಣುವ ಕೈಗಳಿಗೆ, ಮನೆಗಳ ಅಭಿವೃದ್ಧಿಗೆ, ದೇಶದ ಅಭಿವೃದ್ಧಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಡಿಯುವ ಕೈಗಳೇ ಆಧಾರ. ಅಂತಹ ವಿವಿಧ ಸ್ತರಗಳಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕ ವರ್ಗಕ್ಕೆ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಕಾರ್ಮಿಕರಿದ್ದರೆ ಮಾಲೀಕರಾಗೋದು, ಮಾಲೀಕ ಕಾರ್ಮಿಕ ಇಬ್ಬರೂ ಪರಸ್ಪರ ಪೂರಕವಾಗಿರಬೇಕು ಹಾಗಾಗಿ ಕಾರ್ಮಿಕರ ಶೋಷಣೆ ಕೊನೆಗೊಳ್ಳಲಿ. ಕೊರೊನಾ ಕಗ್ಗತ್ತಲು ಕಳೆದು ಕಾರ್ಮಿಕರ ಬಾಳಲ್ಲಿ ಹೊಸಬೆಳಕು ಮೂಡಲಿ. ಎಲ್ಲರ ಬದುಕು ಹಸನಾಗಲಿ ಎಂದು ಕಾರ್ಮಿಕ ದಿನಾಚರಣೆಯ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img