Tuesday, May 18, 2021
Homeಕೋವಿಡ್-1910 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ ಕೊರೊನಾ

ಇದೀಗ ಬಂದ ಸುದ್ದಿ

10 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ ಕೊರೊನಾ

ಮುಂಬೈ: ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಚಿಕ್ಕ ಮಕ್ಕಳು ಕೂಡ ಸೋಂಕಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 10 ವರ್ಷದೊಳಗಿನ ಹಲವು ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮಹಾರಾಷ್ಟ್ರ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

ರಾಜ್ಯದಲ್ಲಿ 1,34,470 ಮಕ್ಕಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅದರಲ್ಲೂ ಕಳೆದ 25 ದಿನಗಳಲ್ಲಿ 75,387 ಮಕ್ಕಳಲ್ಲಿ ಸೋಂಕು ಹರಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದ ಒಂದು ತಿಂಗಳಲ್ಲಿ ಶೇ.51ರಷ್ಟು ಮಕ್ಕಳಲ್ಲಿ ಕೊರೊನಾ ಸೋಂಕು ಹರಡಿರುವುದು ಆತಂಕಕಾರಿಯಾಗಿದೆ. ಅಷ್ಟೇ ಅಲ್ಲ 31-40 ವರ್ಷದೊಳಗಿನ ಶೇ.22.9ರಷ್ಟು ಜನರಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img