Tuesday, May 18, 2021
Homeಬೆಂಗಳೂರುಬೆಂಗಳೂರಿನಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ :...

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ : ರಾಜ್ಯ ಸರ್ಕಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 14 ದಿನಗಳ ಜನತಾ ಕರ್ಪ್ಯೂ ವಿಧಿಸಿತ್ತು. ಇದೀಗ ಕೊರೊನಾ ಕರ್ಪ್ಯೂ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಷ್ಕರಿಸಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಪ್ರಸ್ತುತ ಮಾರುಕಟ್ಟೆಗಳಲ್ಲಿ ಆಗುತ್ತಿರುವ ಜನಸಂದಣಿ ತಪ್ಪಿಸಲು ಇಂದಿನಿಂದಲೇ ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂಉ ಹಾಪ್ ಕಾಮ್ಸ್, ಎಲ್ಲಾ ಹಾಲಿನ ಬೂತುಗಳು, ತಳ್ಳುಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೇ, ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುವುದು ಹಾಗೂ ಕೋವಿಡ್ 19 ನಿಯಮಗಳನ್ನು ಪಾಲಿಸುವುದರೊಂದಿಗೆ ಅನುಮತಿಸಲಾಗಿದೆ. ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img