Tuesday, May 18, 2021
Homeಸುದ್ದಿ ಜಾಲಇಂದು ಐದು ವಿಧಾನಸಭೆಗಳ ಚುನಾವಣಾ ಫಲಿತಾಂಶ

ಇದೀಗ ಬಂದ ಸುದ್ದಿ

ಇಂದು ಐದು ವಿಧಾನಸಭೆಗಳ ಚುನಾವಣಾ ಫಲಿತಾಂಶ

ತೀವ್ರ ಕುತೂಹಲ ಕೆರಳಿಸಿರುವ ಐದು ವಿಧಾನಸಭೆಗಳ ಚುನಾವಣಾ ಫಲಿತಾಂಶ ಭಾನುವಾರ (ಮೇ 2) ಪ್ರಕಟವಾಗಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಚಿತ್ರಣ ಸಿಗುವ ನಿರೀಕ್ಷೆ ಇದೆ. 14 ರಾಜ್ಯಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದ 294, ಅಸ್ಸಾಂನ 126, ಕೇರಳದ 140, ತಮಿಳುನಾಡಿನ 234 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ, ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಕೋವಿಡ್ ಕಾರಣದಿಂದ, ಫಲಿತಾಂಶ ಪ್ರಕಟವಾದ ಬಳಿಕ ಸಂಭ್ರಮಾಚರಣೆ ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಮೆರವಣಿಗೆ, ರ‍್ಯಾಲಿ ನಡೆಸುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ತಿಳಿಸಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಿಸುವ, ಗುಂಪಾಗಿ ಸೇರುವಿಕೆ ಮೇಲೆ ಮದ್ರಾಸ್ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img