Monday, May 10, 2021
Homeಸುದ್ದಿ ಜಾಲಕೊರೊನಾ ನಿಯಮ ಉಲ್ಲಂಘಿಸಿ ಸಂಭ್ರಮಿಸಿದರೆ FIR ದಾಖಲು : ಚುನಾವಣಾ ಆಯೋಗ

ಇದೀಗ ಬಂದ ಸುದ್ದಿ

ಕೊರೊನಾ ನಿಯಮ ಉಲ್ಲಂಘಿಸಿ ಸಂಭ್ರಮಿಸಿದರೆ FIR ದಾಖಲು : ಚುನಾವಣಾ ಆಯೋಗ

 ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಪ್ರಕಟವಾಗುತ್ತಿದೆ. ಆದರೆ ಗೆದ್ದ ಪಕ್ಷಗಳ ಸಂಭ್ರಮಾಚರಣೆಗೆ ಕೊರೊನಾ ಸೋಂಕು ಬ್ರೇಕ್ ಹಾಕಿದೆ.

ಚುನಾವಣೆಯಲ್ಲಿ ಗೆದ್ದ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗುವುದು ಸರ್ವೇ ಸಾಮಾನ್ಯ. ಆದರೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಈಗಾಗಲೇ ಸೂಚನೆ ನೀಡಿದೆ. ಆದಾಗ್ಯೂ ಕ್ಯಾರೇ ಎನ್ನದ ಕೆಲ ರಾಜಕೀಯ ಪಕ್ಷಗಳು ಹಾಗೂ ಕಾರ್ಯಕರ್ತರು ಗೆಲುವಿನ ಬೆನ್ನಲ್ಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಕುಣಿದುಕುಪ್ಪಳಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಚುನಾವಣಾ ಆಯೋಗ, ಕೋವಿಡ್ ನಿಯಮ ಉಲ್ಲಂಘಿಸಿ ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದರೆ ಅಂತವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಖಡಕ್ ಸೂಚನೆ ನೀಡಿದೆ. ಅಲ್ಲದೇ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಇನ್ ಚಾರ್ಜ್ ಗಳನ್ನು ಅಮಾನತು ಮಾಡುವಂತೆ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img