Tuesday, May 18, 2021
Homeಅಂತರ್ ರಾಜ್ಯಕೋವಿಡ್ ಹೆಚ್ಚಳ : ಹರಿಯಾಣದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಇದೀಗ ಬಂದ ಸುದ್ದಿ

ಕೋವಿಡ್ ಹೆಚ್ಚಳ : ಹರಿಯಾಣದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಹರಿಯಾಣ: ಕೋವಿಡ್‍ ಸೋಂಕಿಗೆ ಕಡಿವಾಣ ಹಾಕುವ ನಿಟ್ಟನಲ್ಲಿ ಇದೀಗ ಹರಿಯಾಣ ಸರ್ಕಾರ ಕೂಡ ಸಂಪೂರ್ಣ ಲಾಕ್ ಡೌನ್‍ನ ಮೊರೆ ಹೋಗಿದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿದೆ. ಅದರಲ್ಲೂ ಗುರುಗ್ರಾಮ್‍ ಜಿಲ್ಲೆಯಲ್ಲಿ ಪರಿಸ್ಥಿತಿ ಕೈ ಮೀರಿದೆ. ಈ ಹಿನ್ನೆಲೆ ಅಂತಿಮವಾಗಿ ಸಂಪೂರ್ಣ ಲಾಕ್ ಡೌನ್ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ.

ಇಂದು ಈ ಬಗ್ಗೆ ಮಾಧ್ಯಮಗಳಿಗೆ ತಿಳಿಸಿರುವ ಗೃಹ ಹಾಗೂ ಆರೋಗ್ಯ ಸಚಿವ ಅನಿಲ್ ವಿಜ್, ನಾಳೆಯಿಂದ( ಮೇ.3) ಜಾರಿಗೆ ಬರುವಂತೆ ಒಂದು ವಾರಗಳ ಕಾಲ ಕಟ್ಟುನಿಟ್ಟಾಗಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗುತ್ತಿದೆ ಎಂದಿದ್ದಾರೆ.

ಇಂದು ಮುಂಜಾನೆಯಷ್ಟೇ ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ಗುರುಗ್ರಾಮ್ ಜಿಲ್ಲೆಯಲ್ಲಿ ಔಷಧಿಗಳ ಲಭ್ಯತೆ, ಆರೋಗ್ಯ ಸಂಬಂಧಿ ಸೌಲಭ್ಯಗಳು ಹಾಗೂ ಕೋವಿಡ್ ನಿಯಮಾವಳಿಗಳ ಜಾರಿಗೆ ಬಗ್ಗೆ ಖುದ್ದು ಮೇಲ್ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಇನ್ನು ದೇಶದ ಕೆಲವು ರಾಜ್ಯಗಳು ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಿವೆ. ಕರ್ನಾಟಕದಲ್ಲಿ 14 ದಿನಗಗಳ ವರೆಗೆ ಕರ್ಫ್ಯೂ ಜಾರಿಯಾಗಿದೆ. ಅದೇ ರೀತಿ ಮಹಾರಾಷ್ಟ್ರ ಹಾಗೂ ಗೋವಾದಲ್ಲಿಯೂ ಲಾಕ್ ಡೌನ್ ಘೋಷಿಸಲಾಗಿದೆ. ಇದೀಗ ಹರಿಯಾಣ ಸಹ ಏಳು ದಿನಗಳ ವರೆಗೆ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img