Tuesday, May 11, 2021
Homeಕೋವಿಡ್-19ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾಗೆ ಬಲಿ

ಬೆಂಗಳೂರು : ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಕಿರಣ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಈ ಕುರಿತು ಸ್ವತಃ ಅರ್ಜುನ್ ಜನ್ಯ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದುಃಖದ ವಿಚಾರವನ್ನು ಸಹೋದರನ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

“ಕೋವಿಡ್ ಸೋಂಕಿನಿಂದಾಗಿ ನನ್ನ ಪ್ರೀತಿಯ ಸಹೋದರನನ್ನು ಕಳೆದುಕೊಂಡೆ. ಕಿರಣ್, ನೀನಿಲ್ಲದ ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಾನು ಉಸಿರಾಡುವವರೆಗೂ ನೀನು ನನ್ನ ಉಸಿರಾಟದಲ್ಲಿರುತ್ತೀಯ” ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸೋಂಕು ಬಡವ ಶ್ರೀಮಂತರೆನ್ನದೆ ಎಲ್ಲರನ್ನೂ ತನ್ನ ಸುಳಿಯಲ್ಲಿ ಸಿಲುಕಿಸಿ ಸಾವಿನ ಕೂಪಕ್ಕೆ ದೂಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ನಿರ್ಮಾಪಕರಾದ ರಾಜಶೇಖರ್, ಚಂದ್ರಶೇಖರ್ ಅವರೂ ಕೋವಿಡ್ ಸೋಂಕಿನ ಕಾರಣದಿಂದ ಕೊನೆಯುಸಿರೆಳೆದಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img