Tuesday, May 11, 2021
Homeಸುದ್ದಿ ಜಾಲಜಿಗಣಿಯಲ್ಲಿ 50 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಓಪನ್

ಇದೀಗ ಬಂದ ಸುದ್ದಿ

ಜಿಗಣಿಯಲ್ಲಿ 50 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಓಪನ್

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸೋಂಕಿತರು ಪರದಾಟ ನಡೆಸುತ್ತಿದ್ದಾರೆ‌. ಈ ಹಿನ್ನೆಲೆ ಇಂದು ಬೆಂಗಳೂರು ಹೊರವಲಯ ಜಿಗಣಿಯಲ್ಲಿ 50 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಒಂದನ್ನು ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್, ಐಜಿಪಿ ಚಂದ್ರಶೇಖರ್ ಹಾಗೂ ಶಾಸಕ ಕೃಷ್ಣಪ್ಪ ಉದ್ಘಾಟನೆ ಮಾಡಿದರು.

ಜಿಗಣಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ 50 ಬೆಡ್ ಗಳ ಕೋವಿಡ್ ಸೆಂಟರ್ ಅನ್ನು ಸರ್ಕಾರ, ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ಸ್ಥಳೀಯರ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ. ಕಳೆದ ಬಾರಿಯು ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿಯೂ ಸಹ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಿ ಸುಮಾರು 250 ಕ್ಕೂ ಹೆಚ್ಚು ಜನ ಸೋಂಕಿತರು ಇಲ್ಲಿ ಚಿಕಿತ್ಸೆಯನ್ನ ಪಡೆದು ಗುಣಮುಖರಾಗಿ ಹೋಗಿದ್ದರು.

 ಇದೀಗ ಮತ್ತೆ ಎರಡನೇ ಅಲೆ ಕೊರೊನಾ ಸೋಂಕು ದೇಶ ಸೇರಿದಂತೆ ರಾಜ್ಯಾದ್ಯಂತ ವ್ಯಾಪಾಕವಾಗಿ ಹಬ್ಬುತ್ತಿದ್ದು, ಆಸ್ಪತ್ರೆಗಳಲ್ಲಿ ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಸೋಂಕಿತರು ಸಾವನ್ನಪ್ಪುತ್ತಿರುವವರ ಸಂಖ್ಯೆಯು ಸಹ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಜಿಗಣಿಯಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪನೆ ಮಾಡಿದ್ದು ಇಲ್ಲಿ ಎರಡು ಆಕ್ಸಿಜನ್ ಬೆಡ್ ಗಳು ಸಹ ಲಭ್ಯವಿದೆ, ಮುಂದಿನ ದಿನಗಳಲ್ಲಿ ನುರಿತ ತಜ್ಞರು ಹಾಗೂ ಸಿಬ್ಬಂದಿಯನ್ನ ನೇಮಕ ಮಾಡಿಕೊಳ್ಳುವ ಮೂಲಕ ಮತ್ತಷ್ಟು ಆಕ್ಸಿಜನ್ ಬೆಡ್ ಗಳ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಯಾರು ಸೋಂಕಿಗೆ ತುತ್ತಾಗುತ್ತಾರೆ ಅಂತವರಿಗೆ ಮನೆಯಲ್ಲಿ ಐಸೋಲೇಷನ್ ಆಗಲು ಕಷ್ಟವಿರುವವರು ಸುಸಜ್ಜಿತವಾಗಿ ನಿರ್ಮಾಣವಾಗಿರುವ ಜಿಗಣಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದರು. ಬಳಿಕ ಮಾತನಾಡಿದ ಐಜಿಪಿ ಚಂದ್ರಶೇಖರ್ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿದ್ರು ಜನರು ಮಾತ್ರ ಬೇಕಾಬಿಟ್ಟಿಯಾಗಿ ಓಡಾಟ ನಡೆಸುತ್ತಿದ್ದಾರೆ‌.

ಜನರು ಅನವಶ್ಯಕವಾಗಿ ಹೊರಗೆ ಓಡಾಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡು ಸ್ವಯಂ ಪ್ರೇರಿತರಾಗಿ ಲಾಕ್ ಡೌನ್ ಗೆ ಬೆಂಬಲ ನೀಡಬೇಕು. ಇಲ್ಲವಾದಲ್ಲಿ ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುದು ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img