Monday, May 10, 2021
Homeಆರೋಗ್ಯರಾಜ್ಯದ 'ಅರೋಗ್ಯ ಇಲಾಖೆ' ನೌಕರರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ‘ಅರೋಗ್ಯ ಇಲಾಖೆ’ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೋನಾ 2ನೇ ಅಲೆ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಈ ಸಂದರ್ಭದಲ್ಲಿ ಸೋಂಕಿತರಾಗುತ್ತಿರುವಂತ ಜನರಿಗೆ ಚಿಕಿತ್ಸೆಗಾಗಿ ಬೆಡ್ ಸಿಗೋದೆ ಕಷ್ಟವಾಗಿದೆ. ಇದರ ಮಧ್ಯೆ ವೈದ್ಯರು, ವೈದ್ಯೇತರ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಶೇ.10ರಷ್ಟು ಹಾಸಿಗೆಗಳನ್ನು ಜಿಲ್ಲಾ ಆಸ್ಪತ್ರೆಗಳಲ್ಲಿನ ಕೋವಿಡ್ ಆಸ್ಪತ್ರೆಗಳಲ್ಲಿ ಮೀಸಲಿಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು, ರಾಜ್ಯದ ಎಲ್ಲಾ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾಸ್ಪತ್ರೆ, ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಕೋವಿಡ್-19ರ ಅಲೆಯು ತೀವ್ರವಾಗಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಹಾಗೂ ನಿಯಂತ್ರಣಕ್ಕಾಗಿ ಜಿಲ್ಲೆಗಳಲ್ಲಿನ ನಿಗಧಿತ ಕೋವಿಡ್ ಆಸ್ಪತ್ರೆ (DCH)ಗಳಲ್ಲಿ ಶೇ.10ರಷ್ಟು ಹಾಸಿಗೆಗಳನ್ನು ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಇತರೆ ವೈದ್ಯೇತರ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಮೀಸಲಿಡಲು ಆದೇಶಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img