Tuesday, May 18, 2021
Homeಸುದ್ದಿ ಜಾಲಮೇ 5ರಿಂದ 14 ದಿನಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿ : ಆಂಧ್ರ ಸರ್ಕಾರ ಘೋಷಣೆ

ಇದೀಗ ಬಂದ ಸುದ್ದಿ

ಮೇ 5ರಿಂದ 14 ದಿನಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿ : ಆಂಧ್ರ ಸರ್ಕಾರ ಘೋಷಣೆ

 ಆಂಧ್ರಪ್ರದೇಶರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಮೇ 5 ರಿಂದ 14 ದಿನಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಘೋಷಣೆ ಮಾಡಿದೆ.

ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು ಸೆಕ್ಷನ್ 144 ಜಾರಿ ಮಾಡಲಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ತೆರೆಯಲಿವೆ. ಹೆಚ್ಚು ಜನ ಗುಂಪು ಸೇರುವಂತಿಲ್ಲ. ಹಾಗೇನಾದ್ರು ಗುಂಪು ಸೇರಿದ್ದೇ ಆದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಕೋವಿಡ್ ಪರಿಸ್ಥಿತಿ, ಲಸಿಕೆ ವಿತರಣೆ ಮತ್ತು ಸಾರ್ವಜನಿಕರ ಆರೋಗ್ಯದ ಬಗ್ಗೆ ಚರ್ಚೆ ನಡೆಸಿದರು.

ಆಂಧ್ರಪ್ರದೇಶದಲ್ಲಿ 24 ಗಂಟೆಗಳಲ್ಲಿ (ಸೋಮವಾರ) 18,972 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ 71 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಾದ್ಯಂತ ಈವರೆಗೆ ಒಟ್ಟು 1,66,02,873 ಪರೀಕ್ಷೆಗಳನ್ನು ನಡೆಸಲಾಗಿದೆ. ತಿಂಗಳಿಗೆ ಸರಾಸರಿ 3.10 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img