Tuesday, May 18, 2021
Homeಅಂತರ್ ರಾಜ್ಯಪ.ಬಂಗಾಳ ಮುಖ್ಯಮಂತ್ರಿಯಾಗಿ ಮೇ. 5 ರಂದು ಮಮತಾ ಬ್ಯಾನರ್ಜಿ ಪ್ರಮಾಣವಚನ

ಇದೀಗ ಬಂದ ಸುದ್ದಿ

ಪ.ಬಂಗಾಳ ಮುಖ್ಯಮಂತ್ರಿಯಾಗಿ ಮೇ. 5 ರಂದು ಮಮತಾ ಬ್ಯಾನರ್ಜಿ ಪ್ರಮಾಣವಚನ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಸತತ ಮೂರನೇ ಬಾರಿಗೆ ಮಮತಾ ಬ್ಯಾನರ್ಜಿ ಮೇ. 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ತೃಣಮೂಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ತಿಳಿದುಬಂದಿದೆ. ಮೇ. 6 ರಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಇನ್ನು ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿರುವ ಮಮತಾ ಬ್ಯಾನರ್ಜಿ ಸಂವಿಧಾನದ ಪ್ರಕಾರ, ಇನ್ನು ಆರು ತಿಂಗಳ ಒಳಗಾಗಿ ವಿಧಾನಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿ ಸಿಎಂ ಹುದ್ದೆಗೆ ಏರಬಹುದು. ಇಲ್ಲದಿದ್ದಲ್ಲಿ ಯಾವುದಾದರು ಖಾಲಿ ಇರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಆರು ತಿಂಗಳೊಳಗೆ ಉಪಚುನಾವಣೆಯಲ್ಲಿ ಗೆದ್ದು ಸಿಎಂ ಆಗಬಹುದು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img