Sunday, May 9, 2021
Homeಸುದ್ದಿ ಜಾಲಜನರ ಜೀವದೊಂದಿಗೆ ಸರ್ಕಾರ ಚೆಲ್ಲಾಟ: ಕಾಂಗ್ರೆಸ್ ಮುಖಂಡ ಮುಶ್ರೀಫ್

ಇದೀಗ ಬಂದ ಸುದ್ದಿ

ಜನರ ಜೀವದೊಂದಿಗೆ ಸರ್ಕಾರ ಚೆಲ್ಲಾಟ: ಕಾಂಗ್ರೆಸ್ ಮುಖಂಡ ಮುಶ್ರೀಫ್

ವಿಜಯಪುರ: ಆಕ್ಸಿಜನ್, ವೆಂಟಿಲೇಟರ್‌, ರೆಮ್‌ಡಿಸಿವಿರ್ ಕೊರತೆಯಿಂದ ಜನರು ಸಾವನ್ನಪ್ಪುತ್ತಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆರೋಪಿಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ಒಂದೇ ದಿನ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದು ತೀರಾ ನೋವಿನ ಸಂಗತಿಯಾಗಿದೆ. ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಈ ಸಾವಿಗೆ ಕಾರಣರಾದವರ ಮೇಲೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‍ ಅನ್ನು ಗಂಭೀರ ಸ್ವರೂಪದಿಂದ ನಿಯಂತ್ರಿಸುತ್ತಿಲ್ಲ. ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಅರಿತುಕೊಂಡು ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆಕ್ಸಿಜನ್ ಕೊರತೆಯಿಲ್ಲ, ರೆಮ್ಡಿಸಿವಿರ್ ಕೊರತೆಯಿಲ್ಲ ಎಂದು ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಆದರೆ, ಜನರು ಮಾತ್ರ ಇವರೆಡರ ಕೊರತೆಯಿಂದ ಬಲಿಯಾಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡದೆ ಕೂಡಲೇ ಅಗತ್ಯವಿರುವೆಡೆಗೆ ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಪೂರೈಸಿ, ಜನರ ಜೀವನ ಉಳಿಸಿಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img