Tuesday, May 11, 2021
Homeಸುದ್ದಿ ಜಾಲಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ

ಇದೀಗ ಬಂದ ಸುದ್ದಿ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ

ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ದೇಶದ ಹಲವು ರಾಜ್ಯಗಳಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರ ಸಂಪುಟ ಸಭೆ ಕರೆದಿದ್ದಾರೆ.

ಕೊರೊನಾ ತಡೆಗೆ ತೆಗೆದುಕೊಳ್ಳುವ ಮಹತ್ವದ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕೊರೊನಾ ಲಸಿಕೆ ವಿತರಣೆ ಸೇರಿದಂತೆ ಕೊರೊನಾ ಕಟ್ಟಿ ಹಾಕಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಏನಾದರೂ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆಯಾ, ಈ ಸಂಬಂಧ ಪ್ರಧಾನಿ ಮೋದಿ ಏನಾದರೂ ನಿರ್ಧಾರ ತೆಗೆದುಕೊಳ್ಳಲಿದ್ದಾರಾ ಎಂಬುದನ್ನು ಕಾದು ನೋಡಬೇಕು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img