Tuesday, May 18, 2021
Homeಸುದ್ದಿ ಜಾಲ3ನೇ ಬಾರಿ ಮುಖ್ಯಮಂತ್ರಿಯಾಗಿ 'ಮಮತಾ ಬ್ಯಾನರ್ಜಿ' ಇಂದು ಪ್ರಮಾಣ ವಚನ

ಇದೀಗ ಬಂದ ಸುದ್ದಿ

3ನೇ ಬಾರಿ ಮುಖ್ಯಮಂತ್ರಿಯಾಗಿ ‘ಮಮತಾ ಬ್ಯಾನರ್ಜಿ’ ಇಂದು ಪ್ರಮಾಣ ವಚನ

 ಕೋಲ್ಕತ್ತ, ಮೇ 05; ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಟಿಎಂಸಿ 210 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಮಮತಾ ಬ್ಯಾನರ್ಜಿ 3ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.

ಮಂಗಳವಾರ ಮಮತಾ ಬ್ಯಾನರ್ಜಿ ರಾಜ್ಯಪಾಲ ಜಗದೀಪ್ ಧನ್‌ಕರ್ ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪ್ರಮಾಣ ವಚನ ಸಮಾರಂಭದ ಕುರಿತು ಮಾತುಕತೆ ನಡೆಸಿದರು. ರಾಜಭವನದಲ್ಲಿ ಬುಧವಾರ ಬೆಳಗ್ಗೆ 10.45ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಆದರೆ ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾದ ಆರು ತಿಂಗಳ ಒಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ.

ಕೋವಿಡ್ ಕಾರಣದಿಂದಾಗಿ ಪ್ರಮಾಣ ವಚನ ಸಮಾರಂಭ ಸರಳವಾಗಿ ನಡೆಯಲಿದೆ. ಕೆಲವೇ ಗಣ್ಯರಿಗೆ ಮಾತ್ರವೇ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ರಾಜಭವನದ ಹೊರಗೆ ಸಹ ಟಿಎಂಸಿ ಕಾರ್ಯಕರ್ತರು ಜಮಾವಣೆಗೊಳ್ಳದಂತೆ ಸೂಚನೆ ನೀಡಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 294 ಸ್ಥಾನಗಳಿವೆ. ಇವುಗಳಲ್ಲಿ 292 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಅಭ್ಯರ್ಥಿಗಳು ಮೃತಪಟ್ಟ ಕಾರಣ ಎರಡು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಈ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಟಿಎಂಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿದಿದ್ದ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ದ ಸೋಲು ಕಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img