Monday, June 14, 2021
Homeಕೋವಿಡ್-19ದೆಹಲಿಯಲ್ಲಿ ನಿನ್ನೆ ಒಂದೇ ದಿನ ಕೊರೋನಾಗೆ 341 ಮಂದಿ ಬಲಿ

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ನಿನ್ನೆ ಒಂದೇ ದಿನ ಕೊರೋನಾಗೆ 341 ಮಂದಿ ಬಲಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಶುಕ್ರವಾರ ಬರೋಬ್ಬರಿ 341 ಮಂದಿ ಮೃತಪಟ್ಟಿದ್ದು, 19,832 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಕಳೆದ ಐದು ದಿನಗಳಲ್ಲಿ ಇದು ನಾಲ್ಕನೇ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆಯಾಗಿದೆ. ಒಟ್ಟು 91,035 ಸಕ್ರಿಯ ಪ್ರಕರಣಗಳಿದ್ದು, 11.83 ಲಕ್ಷಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

ಇನ್ನು ಮೇ 3 ರಿಂದ 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಇದುವರೆಗೆ 1.84 ಲಕ್ಷ ಜನರು ತಮ್ಮ ಮೊದಲ ಡೋಸ್ ಪಡೆದಿದ್ದಾರೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img