Tuesday, June 15, 2021
Homeಅಂತರ್ ರಾಜ್ಯಉತ್ತರಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಿ; ಸಿಎಂ ಯೋಗಿಗೆ ಪತ್ರ ಬರೆದ ಕೇಂದ್ರ ಸಚಿವ ಗಂಗ್ವಾರ್!

ಇದೀಗ ಬಂದ ಸುದ್ದಿ

ಉತ್ತರಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಿ; ಸಿಎಂ ಯೋಗಿಗೆ ಪತ್ರ ಬರೆದ ಕೇಂದ್ರ ಸಚಿವ ಗಂಗ್ವಾರ್!

ನವ ದೆಹಲಿ (ಮೇ 09); ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಉತ್ತರಪ್ರದೇಶದ ಆರೋಗ್ಯ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬರೇಲಿಯ ಬಿಜೆಪಿ ಸಂಸದರೂ ಆಗಿರುವ ಗಂಗ್ವಾರ್, ಉತ್ತರ ಪ್ರದೇಶದ ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಕೆಲವು ಕ್ರಮಗಳನ್ನು ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ.

ತಮ್ಮ ಪತ್ರದಲ್ಲಿ ಕೆಲವು ಅಂಶಗಳನ್ನು ಉಲ್ಲೇಖಿಸಿರುವ ಸಂತೋಷ್ ಗಂಗ್ವಾರ್, “ಉತ್ತರಪ್ರದೇಶದ ಆರೋಗ್ಯ ಅಧಿಕಾರಿಗಳು ಯಾರ ಕರೆಯನ್ನೂ ಸ್ವೀಕರಿಸುತ್ತಿಲ್ಲ. ರೋಗಿಗಳು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ರೆಫರಲ್ ಪತ್ರದ ಹೆಸರಿನಲ್ಲಿ ಓಡಾಡಿಸಲ್ಪಡುತ್ತಿದ್ದಾರೆ. ಅಲ್ಲದೆ, ಉತ್ತರಪ್ರದೇಶದಲ್ಲಿ ಆಮ್ಲಜನಕದ ಕೊರತೆ ಎದುರಾಗಿದ್ದು, ಆ ಬೇಡಿಕೆಯನ್ನು ನಿಭಾಯಿಸಲು ಬರೇಲಿಯಲ್ಲಿ ಶೀಘ್ರದಲ್ಲೇ ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, “ಆಸ್ಪತ್ರೆಗಳಲ್ಲಿ ಬಳಸುವ ಬೈಪ್ಯಾಪ್ ಯಂತ್ರಗಳು, ವೆಂಟಿಲೇಟರ್‌ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ವೈದ್ಯಕೀಯ ಉಪಕರಣಗಳ ಬೆಲೆಯನ್ನು ಉತ್ತರಪ್ರದೇಶ ಸರ್ಕಾರ ಶೀಘ್ರದಲ್ಲೇ ಸರಿ ಸ್ಥಿತಿಗೆ ತರಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಎಂಎಸ್‌ಎಂಇ ಅಡಿಯಲ್ಲಿ ರಿಯಾಯಿತಿ ನೀಡಬೇಕು.

ಬರೇಲಿಯಲ್ಲಿ ಆಮ್ಲಜನಕದ ಕೊರತೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ, ಏಕೆಂದರೆ ಅನೇಕ ಜನರು ತಮ್ಮ ಮನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಮ್ಲಜನಕ ಸಿಲಿಂಡರ್​ಗಳನ್ನು ಸಂಗ್ರಹಿಸಿದ್ದಾರೆ. ಹೀಗಾಗಿ ಆಮ್ಲಜನಕ ಸಿಲಿಂಡರ್‌ಗಳ ಅಗತ್ಯವಿದ್ದು, ಯಾರಿಗೆ ಅದು ಲಭ್ಯವಾಗಿಲ್ಲವೋ ಅಂತವರನ್ನು ಗುರುತಿಸಬೇಕು. ಅಂತವರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸಬೇಕು. ಆಮ್ಲಜನಕವನ್ನೂ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗಿದ್ದು, ಸರ್ಕಾರ ಇದಕ್ಕೂ ಕಡಿವಾಣ ಹಾಕಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img