Sunday, June 13, 2021
Homeಸುದ್ದಿ ಜಾಲರಾಜ್ಯದಲ್ಲಿ ಇಂದು 39,305 ಜನರಿಗೆ ಕೋವಿಡ್ ದೃಢ, 596 ಜನರು ಸಾವು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 39,305 ಜನರಿಗೆ ಕೋವಿಡ್ ದೃಢ, 596 ಜನರು ಸಾವು

ಬೆಂಗಳೂರು : ರಾಜ್ಯದಲ್ಲಿ ಹಿಂದಿನ ಎಲ್ಲಾ ದಾಖಲೆ ಉಡೀಸ್ ಮಾಡುವಂತೆ ಮತ್ತೆ ಕಿಲ್ಲರ್ ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾದಂತ 596 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 32,188 ಜನರು ಸೇರಿದಂತೆ ಇದುವರೆಗೆ 13,83,285 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 5,71,006 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇನ್ನೂ ಇಂದು ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಆರ್ಭಟಿಸಿದೆ. ಇಂದು ಬೆಂಗಳೂರಿನಲ್ಲಿ 374 ಜನರು ಸೇರಿದಂತೆ ರಾಜ್ಯಾಧ್ಯಂತ 596 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,372ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಇಂದು ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ (ಕೇಂದ್ರ) ಸ್ವಾಮ್ಯದ ಐಟಿಐ ಆಸ್ಪತ್ರೆಯನ್ನು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಪುನಶ್ಚೇತನಗೊಳಿಸಿ ತಾತ್ಕಾಲಿಕವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಸಚಿವರು ತಾವು ಈಗಾಗಲೇ ಸಂಬಂಧಪಟ್ಟ ಸಚಿವರಿಗೆ (ರವಿಶಂಕರ್ ಪ್ರಸಾದ್) ಈ ಬಗ್ಗೆ ಪತ್ರ ಬರೆದಿದ್ದು ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರುವ ಆಸ್ಪತ್ರೆಗಳು ಸಾಲುತ್ತಿಲ್ಲ. ಹೆಚ್ಚೆಚ್ಚು ತಾತ್ಕಾಲಿಕ ಕೋವಿಡ್ ಕೇಂದ್ರಗಳನ್ನು ಕಲ್ಪಿಸುವುದು ಅನಿವಾರ್ಯವಾಗಿದೆ. ಕೆ ಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐಟಿಐ ಆಸ್ಪತ್ರೆಯು ವಿಸ್ತಾರವಾದ ಸ್ಥಳಾವಕಾಶ ಹೊಂದಿದೆ. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರೂ ಆಗಿರುವ ಅವರು ಈ ಬಗ್ಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

ಆಕ್ಸಿಜಿನೇಟೆಡ್ ಹಾಸಿಗೆಗಳು, ತೀವ್ರ ನಿಗಾ ಘಟಕ ಸೇರಿದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಶುಶ್ರೂಸಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img