Sunday, June 13, 2021
Homeಸುದ್ದಿ ಜಾಲಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 16,747 ಮಂದಿಗೆ ಕೊರೊನಾ, 374 ಜನರು ಬಲಿ

ಇದೀಗ ಬಂದ ಸುದ್ದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 16,747 ಮಂದಿಗೆ ಕೊರೊನಾ, 374 ಜನರು ಬಲಿ

ಬೆಂಗಳೂರು : ರಾಜ್ಯದಲ್ಲಿ ಹಿಂದಿನ ಎಲ್ಲಾ ದಾಖಲೆ ಉಡೀಸ್ ಮಾಡುವಂತೆ ಮತ್ತೆ ಕಿಲ್ಲರ್ ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ , ಸೋಂಕಿತರಾದಂತ 596 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 16747 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 967640 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 14289 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 606754 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಇಂದು 374 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 8431 ಕ್ಕೆ ಏರಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ 352454 ಸಕ್ರಿಯ ಪ್ರಕರಣಗಳಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 32,188 ಜನರು ಸೇರಿದಂತೆ ಇದುವರೆಗೆ 13,83,285 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 5,71,006 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇನ್ನೂ ಇಂದು ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಆರ್ಭಟಿಸಿದೆ. ಇಂದು ಬೆಂಗಳೂರಿನಲ್ಲಿ 374 ಜನರು ಸೇರಿದಂತೆ ರಾಜ್ಯಾಧ್ಯಂತ 596 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,372ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img