Tuesday, June 15, 2021
Homeಸುದ್ದಿ ಜಾಲಕನ್ನಡದ ಹಿರಿಯ ಕಲಾವಿದ ಹಾಸ್ಯ ನಟ ರಾಜಾರಾಂ ನಿಧನ

ಇದೀಗ ಬಂದ ಸುದ್ದಿ

ಕನ್ನಡದ ಹಿರಿಯ ಕಲಾವಿದ ಹಾಸ್ಯ ನಟ ರಾಜಾರಾಂ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹಿರಿಯ ಹಾಸ್ಯ ನಟ ಎಂದೇ ಗುರ್ತಿಸಿಕೊಂಡಿದ್ದಂತ ನಟ ರಾಜಾರಾಂ(82) ಇಂದು ನಿಧನರಾಗಿದ್ದಾರೆ.

ಕನ್ನಡದ ಹಿರಿಯ ಕಲಾವಿಧ, ಸಿನಿಮಾ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ನಟರಾಗಿ ಗುರ್ತಿಸಿಕೊಂಡಿದ್ದಂತ ಹಿರಿಯ ಹಾಸ್ಯನಟ ರಾಜಾರಾಂ, ಇಂದು ನಿಧನರಾಗಿದ್ದಾರೆ. ಕನ್ನಡ ವಿವಿಧ ಚಿತ್ರಗಳಲ್ಲಿ ಅಭಿನಯಿಸಿದ್ದಂತ ಹಿರಿಯ ಹಾಸ್ಯನಟ ರಾಜಾರಾಂ ಇನ್ನಿಲ್ಲವಾಗಿದ್ದಾರೆ.

ಈ ಕುರಿತಂತೆ ನಟ ಸೃಜನ್ ಲೋಕೇಶ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ, ಮಾಹಿತಿ ಹಂಚಿಕೊಂಡಿದ್ದು, ಹಾಸ್ಯನಟ ರಾಜಾರಾಂ ಇನ್ನಿಲ್ಲವಾಗಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಅಂದಹಾಗೇ ರಂಗಭೂಮಿಯ ಪ್ರಖ್ಯಾತ ಕಲಾವಿದರಾದ ರಾಜಾರಾಂರವರು 1938ರಲ್ಲಿ ಹುಟ್ಟಿದ್ದು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ನಲ್ಲಿ. ತಂದೆ ಜಿ.ಎಸ್‌. ರಘುನಾಥರಾವ್‌, ತಾಯಿ ಶಾರದಾಬಾಯಿ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ. ಮಲ್ಲೇಶ್ವರದ ಸ್ನೇಹಿತರೊಡನೆ ಸೇರಿ ಕಟ್ಟಿದ ‘ರಸಿಕ ರಂಜನಿ ಕಲಾವಿದರು’ ಸಂಸ್ಥಾಪಕರಲ್ಲೊಬ್ಬರು.

ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದ, ಪರ್ವತವಾಣಿ, ಕೈಲಾಸಂ, ದಾಶರಥಿದೀಕ್ಷಿತ್‌, ಕೆ. ಗುಂಡಣ್ಣನವರ ನಾಟಕಗಳಲ್ಲಿ ಅಭಿನಯ. ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ಒಡನಾಟ. 1964 ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ ಸ್ಥಾಪಿಸಿದ್ದು ಸಚಿವಾಲಯ ಸಾಂಸ್ಕೃತಿಕ ಸಂಘ.

ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್‌ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿ, ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳ ನಟ. 1972ರಿಂದ ನಟರಂಗ ಮತ್ತು 1983ರಿಂದ ವೇದಿಕೆಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ, ರವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಪಡೆದ ಖ್ಯಾತಿ. ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಇವರ ನಿರ್ದೇಶನದ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ. ಹೈದರಾಬಾದ್‌, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ ಮುಂಬಯಿ, ಚಂಡಿಗರ್ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿ. ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, ಮಯೂರ ಕಲಾರಂಗ, ಕರ್ನಾಟಕ ನಾಟಕ ಅಕಾಡೆಮಿ ಮುಂತಾದುವುಗಳಿಂದ ಸಂದ ಗೌರವ ಪ್ರಶಸ್ತಿ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img