Tuesday, June 15, 2021
Homeಕೋವಿಡ್-19ರಾಜ್ಯದಲ್ಲಿ ಇಂದು 39,510 ಕೊರೋನಾ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 39,510 ಕೊರೋನಾ ಕೇಸ್ ಪತ್ತೆ

ಬೆಂಗಳೂರು (ಮೇ 11); ಎರಡನೇ ಅಲೆ ಕೊರೋನಾ ಸೋಂಕು ರಾಜ್ಯದಲ್ಲಿ ನಿಯಂತ್ರಣ ಮೀರಿದೆ. ಲಾಕ್​ಡೌನ್ ನಡುವೆಯೋ ಸೋಂಕು ನಿಯಂತ್ರಣ ವಾಗುತ್ತಿಲ್ಲ. ಕಳೆದ ಒಂದು ವಾರದಿಂದ ದಿನವೊಂದಕ್ಕೆ ಸರಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ನಡುವೆ ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 480 ಜನ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಮೀರಿರುವುದು ಸ್ಪಷ್ಟವಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಕಳೆದ 24 ಗಂಟೆಗಳ ಅವಧಿ ಯಲ್ಲಿ ರಾಜ್ಯದಲ್ಲಿ 39,510 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 20, 897 ಪ್ರಕರಣಗಳು ಪತ್ತೆ ಯಾಗಿದೆ. ರಾಜ್ಯದಲ್ಲಿ 7 ಲಕ್ಷಕ್ಕೂ ಅಧಿಕ ಸಕ್ರೀಯ ಪ್ರಕರಣಗಳಿವೆ. ಇನ್ನೂ ಬೆಂಗಳೂರು ಒಂದರಲ್ಲೇ 15,879 ಹೊಸ ಕೇಸ್ ಹಾಗೂ 259 ಸಾವು ಸಂಭವಿಸಿದ್ದು, 4.2 ಲಕ್ಷ ಸಕ್ರೀಯ ಸೋಂಕಿತರು ಬೆಂಗಳೂರಲ್ಲೆ ಇದ್ದಾರೆ. 

ರಾಜ್ಯದಲ್ಲಿ ಈ ಮಟ್ಟಿಗೆ ಸೋಂಕು ಹರಡುತ್ತಿದ್ದು, ಹೀಗೆ ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲಿದೆ. ಈ ಹಿನ್ನಲೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಮೇ. 10 ರಿಂದ ಮೇ 24ರವರೆಗೆ ಲಾಕ್​ಡೌನ್​ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬಾರಿ ಕೆಲವು ವಿನಾಯಿತಿಗಳ ಹೊರಾತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇನ್ನಾದರೂ ಸೋಂಕು ನಿಯಂತ್ರಣಕ್ಕೆ ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ತಜ್ಞರ ಪ್ರಕಾರ, ಮುಂದಿನ ಕನಿಷ್ಠ 10 ರಿಂದ 14 ದಿನ ಬಹಳ ಕಷ್ಟಕರವಾದ ದಿನವಾಗಿದ್ದುಮ, ಸೋಂಕು ಹೆಚ್ಚು ಉಲ್ಬಣಗೊಳ್ಳಲಿದೆ. ಈ ಹಿನ್ನಲೆ ರಾಜ್ಯದಲ್ಲಿ ಲಾಕ್​ಡೌನ್​ ಮಹತ್ವದ ಪಾತ್ರ ನಿರ್ವಹಿಸಲಿದೆ ಎನ್ನಲಾಗುತ್ತಿದೆ. ಈ ಸೋಂಕು ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಲಾಕ್​ಡೌನ್ ಆಗಿದ್ದು, ಸೋಂಕಿನ ಸರಪಳಿ ಕತ್ತರಿಸಲು ಜನರು ಮನೆಯಲ್ಲಿರುವುದೇ ಒಳಿತು ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದಂತೆ ಮತ್ತಷ್ಟು ಆಕ್ಸಿಜನ್​ ಮತ್ತು ಬೆಡ್​ ಸಮಸ್ಯೆ ಹೆಚ್ಚಲಿದೆ. ಈ ಹಿನ್ನಲೆ ಮತ್ತಷ್ಟು ಆಕ್ಸಿಜನ್​ ಪೂರೈಕೆಗೆ ಮತ್ತು ಕೊರೋನಾ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವ ಅವಶ್ಯಕತೆ ಇದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img